ಜಿತೇಂದ್ರ ವರ್ಮಾ ಅವರು ಮಧ್ಯಪ್ರದೇಶದ ಧಾರ್ ಜಿಲ್ಲೆಯ ಅಜೀಂ ಪ್ರೇಮ್‌ಜಿ ಫೌಂಡೇಷನ್‌ನಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರು ನವದೆಹಲಿಯ ಇಂದಿರಾ ಗಾಂಧಿ ನ್ಯಾಷನಲ್ ಓಪನ್ ಯೂನಿವರ್ಸಿಟಿಯಿಂದ ಫೈನಾನ್ಸ್ ವಿಷಯದಲ್ಲಿ MBA ಪದವಿಯನ್ನು ಪಡೆದಿದ್ದಾರೆ. ಜಿತೇಂದ್ರ ಅವರು ಸರ್ಕಾರಿ ಶಾಲೆಗಳಲ್ಲಿ ಗಣಿತ ಶಿಕ್ಷಕರಾಗಿಯೂ, ಪ್ರಾಂಶುಪಾಲರಾಗಿಯೂ ಕೆಲಸ ಮಾಡಿದ್ದಾರೆ. ಪ್ರಸ್ತುತ ಅವರು ಗಣಿತ ಬೋಧನೆಯಲ್ಲಿ ಪರಿಕಲ್ಪನಾತ್ಮಕ ತಿಳುವಳಿಕೆ ಮತ್ತು ಬೋಧನಾ ವಿಧಾನದ ಪ್ರಕ್ರಿಯೆಗಳ ಮೇಲೆ ಗಮನಹರಿಸುತ್ತಿದ್ದಾರೆ. ಕಳೆದ 5 ವರ್ಷಗಳಿಂದ ಶಿಕ್ಷಕರೊಂದಿಗೆ ಮತ್ತು ಮಕ್ಕಳೊಂದಿಗೆ ಗಣಿತ ಕಲಿಕೆಯಲ್ಲಿ ತೊಡಗಿಸಿಕೊಂಡಿರುವ ಅವರು, ತಪ್ಪುಗ್ರಹಿಕೆಗಳನ್ನು ನಿವಾರಿಸಲು ಮತ್ತು ಗಣಿತವನ್ನು ಸುಲಭವಾಗಿ ಕಲಿಯಲು ಸಹಾಯಕವಾಗುವ ಬೋಧನಾ ಸಾಮಗ್ರಿಗಳನ್ನು ರೂಪಿಸುವಲ್ಲಿ ಆಸಕ್ತಿ ಹೊಂದಿದ್ದಾರೆ.