ಮನೀಷಾ ಗೋಯಲ್ ದೆಹಲಿಯ ಖಾಸಗಿ ಮತ್ತು ಸರ್ಕಾರಿ ಶಾಲೆಗಳಲ್ಲಿ 12 ವರ್ಷಗಳ ಕಾಲ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ಕೆಲಸ ನಿರ್ವಹಿಸಿದ್ದಾರೆ. ಬೋಧನಾ ಕೆಲಸದ ಜೊತೆಗೆ ಅವರು ಸುಮಾರು 5 ವರ್ಷಗಳ ಕಾಲ ತಮ್ಮ ಶಾಲೆಯ ಗ್ರಂಥಾಲಯವನ್ನು ಕೂಡ ನಿರ್ವಹಿಸಿದ್ದಾರೆ. ಅವರು ತಮ್ಮ ಮಕ್ಕಳಲ್ಲಿ ಸಾಹಿತ್ಯ ಹಾಗೂ ಗಣಿತದ ಆಸಕ್ತಿಯನ್ನು ಬೆಳೆಸಲು ಪ್ರಯತ್ನಿಸಿದ್ದಾರೆ. ಮನೀಷಾ ಅವರು ದೆಹಲಿ ವಿಶ್ವವಿದ್ಯಾಲಯದಿಂದ ಎಲೆಮೆಂಟರಿ ಎಜುಕೇಷನ್‌ನಲ್ಲಿ ಪದವಿಯನ್ನು ಮತ್ತು ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ವಿಶ್ವವಿದ್ಯಾಲಯದಿಂದ ಶಿಕ್ಷಣ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ.