ಮ್ಯಾಥ್ ಸ್ಪೇಸ್

mathspace@apu.edu.in
ಮ್ಯಾಥ್ ಸ್ಪೇಸ್

‘ಮ್ಯಾಥ್ ಸ್ಪೇಸ್’, ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಲ್ಲಿ ಇರುವ ಒಂದು ಗಣಿತ ಪ್ರಯೋಗಾಲಯ. ಇದು ಶಾಲೆಗಳು, ಶಿಕ್ಷಕರು, ಪೋಷಕರು, ಮಕ್ಕಳು, ಶಾಲಾ ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಸರ್ಕಾರೇತರ ಸಂಸ್ಥೆಗಳು ಮತ್ತು ಶಿಕ್ಷಕ ಶಿಕ್ಷಕರಿಗೆ ನೆರವು ನೀಡುತ್ತದೆ. ಇದು ಗಣಿತಕ್ಕೆ ಸಂಬಂಧಿಸಿದ ಹಲವು ಕಲಿಕಾ-ಬೋಧನಾ ಸಾಮಗ್ರಿಗಳು, ಮತ್ತು ಕಸದಿಂದ ಮಾಡಬಹುದಾದ ಅವುಗಳ ಕಡಿಮೆ ವೆಚ್ಚದ ರೂಪಗಳನ್ನು ಅನ್ವೇಷಿಸುತ್ತದೆ. ಮ್ಯಾಥ್ ಸ್ಪೇಸ್, ಗಣಿತವೆಂದರೆ ಭಯ ಪಡುವ ಅಥವಾ ಗಣಿತವನ್ನು ದ್ವೇಷಿಸುವ ಮತ್ತು ಗಣಿತವನ್ನು ಪ್ರೀತಿಸುವ – ಈ ಎರಡೂ ಗುಂಪಿನವರೊಂದಿಗೂ ತೊಡಗಿಸಿಕೊಳ್ಳಲು ಪ್ರಯತ್ನಿಸುತ್ತದೆ. ಹಲವರೊಂದಿಗಿನ ನಡೆಯುವ ಸಂವಾದಗಳಿಂದ, ಆಲೋಚನೆಗಳು ಹುಟ್ಟಿ, ವಿಕಾಸಗೊಳ್ಳುವ ಜಾಗ ಇದು.

ಮ್ಯಾಥ್ ಸ್ಪೇಸ್: https://sites.google.com/apu.edu.in/mathspace/home

ಲೇಖಕರಿಂದ

ಪತಂಗ ಕುಟುಂಬಗಳು: ವಂಶವೃಕ್ಷದ ಒಂದು ತನಿಖೆ
ಪೋಸ್ಟರ್‌ಗಳು Preparatory (Class 3-5) Middle (Class 6-8)

ಪತಂಗ ಕುಟುಂಬಗಳು: ವಂಶವೃಕ್ಷದ ಒಂದು ತನಿಖೆ

ಪೋಸ್ಟರಿನ ಪ್ರಕಾರ 11 ಬಗೆಯ ಪತಂಗಗಳಿವೆ (ವಜ್ರಾಕೃತಿಯನ್ನು ಹೊರತುಪಡಿಸಿ)

ಮೇಲಿನ 11 ಬಗೆಯ ಪತಂಗಗಳೊಂದಿಗೆ ಗೆಳೆತನ ಬೆಳೆಸಿಕೊಳ್ಳಲು ಈ ಪೋಸ್ಟರ್ ನಿಮ್ಮ ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತದೆ. ಪತಂಗ K1,K2,…..K11 ಗಳನ್ನು ಕುರಿತು ಅಧ್ಯಯನ ಮಾಡಿ, ಅವುಗಳ ಗುಣಲಕ್ಷಣಗಳನ್ನು ತಾವೇ ಕಂಡುಹಿಡಿಯಲು ವಿದ್ಯಾರ್ಥಿಗಳಿಗೆ ಸಮಯಾವಕಾಶ ನೀಡಿರಿ. ಕೆಲವು ಪ್ರಮುಖ ಅಂಶಗಳನ್ನು ಕೆಳಗೆ ನೀಡಲಾಗಿದೆ. ಚರ್ಚೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕೆಳಗೆ ಕೊಟ್ಟಿರುವ ಅಥವಾ ಇತರ ಅಂಶಗಳನ್ನು ಖಂಡಿತವಾಗಿ ಕಂಡುಕೊಳ್ಳುತ್ತಾರೆ. ಇಲ್ಲದಿದ್ದಲ್ಲಿ ಇವುಗಳನ್ನು ಸೂಕ್ತವಾದ ಸಮಯದಲ್ಲಿ ಅವರ ಜೊತೆ ಹಂಚಿಕೊಳ್ಳಿ.

29 ಮೇ 2024